'ಕಲ್ಲಿದ್ದಲು ಹಗರಣವನ್ನು ಬಿಜೆಪಿ ಬಯಲು ಮಾಡಿದ ಮೇಲೆ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಕಲ್ಲಿದ್ದಲು ಪೂರೈಸಲು ಒಪ್ಪಂದ ಮಾಡಿಕೊಂಡಿದ್ದ ಕಂಪೆನಿ ಕಟ್ಟಬೇಕಿದ್ದ ದಂಡದ ಹಣವನ್ನು ಸುಪ್ರೀಂಕೋರ್ಟ್ ಆದೇಶದ ಅನ್ವಯವೇ ಪಾವತಿಸಿದ್ದೇವೆ ಎಂದು ಇಬ್ಬರೂ ಹೇಳಿಕೆ ನೀಡಿದ್ದಾರೆ' ಎಂದರು.
'ಸಿದ್ದರಾಮಯ್ಯ ಪರ್ಸಂಟೇಜ್ ಮುಖ್ಯಮಂತ್ರಿ. ಯಾವುದೇ ಯೋಜನೆಗೂ ಶೇ 25ರಷ್ಟು ಕಮೀಶನ್ ಇಲ್ಲದೆ ಅನುಮೋದನೆ ನೀಡುವುದಿಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
Karnataka BJP president B.S.Yeddyurappa verbally attacked Chief Minister Siddaramaiah.
B S Yeddyurappa calls Siddaramaiah as Percentage Chief Minister
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ, 'ಯೋಜನೆ ಅಥವ ಕಾಮಗಾರಿ ಅಂದಾಜು ಮೊತ್ತವನ್ನು ಶೇ 25ರಷ್ಟು ಹೆಚ್ಚಿಸಿ, ಅದನ್ನು ಕಮೀಶನ್ ರೂಪದಲ್ಲಿ ಪಡೆಯುವ ಅಭ್ಯಾಸ ಮಾಡಿಕೊಂಡಿದ್ದಾರೆ' ಎಂದು ದೂರಿದರು.