'ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಅವಕಾಶ ನೀಡಲಾಗುತ್ತದೆ' ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, 'ಬಸ್ ನಿಲ್ದಾಣಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ. ಸರ್ಕಾರ ಕೇಳುವ ಮೊದಲೇ ನಾವು ಕ್ಯಾಂಟೀನ್ ತೆರೆಯಲು ಅವಕಾಶ ನೀಡುತ್ತೇವೆ' ಎಂದರು...ಕರ್ನಾಟಕ ಸರ್ಕಾರ ಈಗಾಗಲೇ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ರಾಜ್ಯಾದ್ಯಂತ 246 ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತದೆ. 2018ರ ಜನವರಿ 1ರಂದು ಅವುಗಳನ್ನು ಉದ್ಘಾಟಿಸಲಾಗುತ್ತದೆ.
Karnataka transport minister H.M.Revanna said, we will allow to set up Indira canteen in KSRTC bus stand.
ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ
Indira canteen to set up at ksrtc bus stand