ಡಾ.ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರಲ್ಲೊಬ್ಬರಾದ ಲಕ್ಕಿ ಗೋಪಾಲ್ ನಿರ್ದೇಶನದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎಂಬ ಸುದ್ದಿಯನ್ನ ಫಿಲ್ಮಿಬೀಟ್ ಈ ಹಿಂದೆ ವರದಿ ಮಾಡಿತ್ತು. ಈ ಚಿತ್ರದ ಮುಹೂರ್ತ ಸಮಾರಂಭ ಈಗ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಂದು ನಡೆಯಲಿದೆ. ತುಂಬ ಅದ್ಧೂರಿಯಾಗಿ ಜರಗಲಿರುವ ಈ ಕಾರ್ಯಕ್ರಮಕ್ಕೆ ಅತಿಥಿ ಯಾರಾಗಬಹುದು ಎಂಬ ಕುತೂಹಲ ಕಾಡಿತ್ತು.ಇದೀಗ, ಶಿವಣ್ಣ ಅವರ ಹೊಸ ಚಿತ್ರದ ಮುಹೂರ್ತ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಸಿಕ್ಕಿದ್ದು, ಯಾರೆಲ್ಲಾ ಗಣ್ಯರು ಆಗಮಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ದೊಡ್ಮನೆ ಸೊಸೆಯರಾದ ಗೀತಾ ಶಿವರಾಜ್ ಕುಮಾರ್, ಮಂಗಳಾ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿ ಜ್ಯೋತಿ ಬೆಳಗಿಸುವುದರ ಮೂಲಕ ಶಿವಣ್ಣನ ಹೊಸ ಚಿತ್ರಕ್ಕೆ ಚಾಲನೆ ನೀಡಲಿದ್ದಾರೆ.ಲಕ್ಕಿ ಗೋಪಾಲ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ಚಿತ್ರದ ಟೈಟಲ್ ಏನು ಎಂಬುದು ಕುತೂಹಲ ಮೂಡಿಸಿದೆ.