ಕರ್ನಾಟಕ ವಿಧಾನಸಭಾ ಚುನಾವಣೆ 2018 : ಕ್ಯಾಪ್ಸ್ ಸಮೀಕ್ಷೆ ಪ್ರಕಾರ ಬಿಜೆಪಿಗೆ 113 ಸೀಟುಗಳ ಗೆಲುವು |Oneindia Kannada

Oneindia Kannada 2017-11-07

Views 1.3K

A new survey in Karnataka gives the BJP 113 seats in the forthcoming assembly elections. The poll survey agency Creative Center for Political and Social Studies (COPS) gives the ruling Congress 85 and the JD(S) 25.


ಬಿಜೆಪಿಗೆ ಸರಳ ಬಹುಮತ, ಮತ್ತೆ ಅಧಿಕಾರ : ಕಾಪ್ಸ್ ಸಮೀಕ್ಷೆ. ಕರ್ನಾಟಕದಲ್ಲಿ ಈ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿಗೆ ಭರ್ಜರಿ ಜಯ ಲಭಿಸಲಿದೆ ಎಂದು ಸಮೀಕ್ಷೆಯೊಂದು ವರದಿ ನೀಡಿದೆ. ಸಿ ಫೋರ್ ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಪ್ಸ್ ಸಂಸ್ಥೆ ಈ ಹಿಂದೆ ಪ್ರಕಟಿಸಿದ ವರದಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವರದಿ ಬಂದಿತ್ತು. ಒಂದು ವೇಳೆ ಈಗ ಚುನಾವಣೆ ನಡೆದರೆ ಯಾವ ಪಕ್ಷಕ್ಕೆ ಬಹುಮತ ಸಿಗಲಿದೆ? ಎಂಬ ಪ್ರಶ್ನೆ ಹೊತ್ತು ಕಾಪ್ಸ್ ಸಂಸ್ಥೆ ಸಮೀಕ್ಷೆ ನಡೆಸಿತ್ತು.113 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿರುವ ಕಮಲ ಪಕ್ಷ ಮತ್ತೊಮ್ಮೆ ಅಧಿಕಾರ ಪೀಠಕ್ಕೇರುವ ಕನಸು ಕಾಣಬಹುದು ಎಂದು ಸಮೀಕ್ಷೆ ಹೇಳಿದೆ. ಕ್ರಿಯೇಟೀವ್ ಸೆಂಟರ್ ಫಾರ್ ಪೊಲಿಟಿಕಲ್ ಆ್ಯಂಡ್ ಸೋಷಿಯಲ್ ಸ್ಟಡೀಸ್ (COPS) ಸಂಸ್ಥೆ ನಡೆಸಿದ ಸಮೀಕ್ಷೆಯ ವರದಿ ಇದಾಗಿದೆ.

Share This Video


Download

  
Report form
RELATED VIDEOS