ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಾಜಿ ಸಂಸದೆ ರಮ್ಯಾ ಸ್ಪರ್ಧಿಸುವ ಕುರಿತು ಸ್ಪಷ್ಟನೆ ಸಿಕ್ಕಿದೆ. ಮಂಡ್ಯ, ಮೇಲುಕೋಟೆ ಕ್ಷೇತ್ರದಿಂದ ರಮ್ಯಾ ಸ್ಪರ್ಧಿಸಬಹುದು ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ಆಪ್ತರ ಬಳಿ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾತುಕತೆ ನಡೆಸಿದ್ದಾರೆ. ಮಂಡ್ಯ ರಾಜಕಾರಣದಲ್ಲಿ ಪುನಃ ಸಕ್ರಿಯರಾಗುವ ಕುರಿತು ಚರ್ಚೆ ನಡೆಸಿದ್ದಾರೆ. ಕಳೆದ ಒಂದು ವಾರದಿಂದ ರಮ್ಯಾ ಮತ್ತು ಅಂಬರೀಶ್ ಮಂಡ್ಯ ರಾಜಕಾರಣದಲ್ಲಿ ಸಕ್ರಿಯರಾಗುವ ಕುರಿತು ಚರ್ಚೆಗಳು ನಡೆಯುತ್ತಿದ್ದವು. ರಮ್ಯಾ ಅವರು ಆಪ್ತರ ಬಳಿ ಮಾತನಾಡುವಾಗ ಪಕ್ಷದ ನಾಯಕರು ನೀಡಿರುವ ಸೂಚನೆಯನ್ನು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ರಮ್ಯಾ ಮತ್ತು ಅಂಬರೀಶ್ ನಡುವೆ ಶೀತಲ ಸಮರ ನಡೆಯಲಿದೆ. ಇಬ್ಬರೂ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.
Ramya clarifies about Assembly election. Will she contest ? if yes, from which region will it be ? wath the video to know more.