ಆಪರೇಷನ್ ಕಮಲ | 7 ಜೆಡಿಎಸ್ ಶಾಸಕರು ಬಿಜೆಪಿಗೆ | Oneindia Kannada

Oneindia Kannada 2017-11-20

Views 1

Ahead of the assembly election 2018 operation Kamala again in Karnataka?. BJP leaders in touch with 7 JDS MLA's to strengthen the party.


ಆಪರೇಷನ್ ಕಮಲ, 7 ಜೆಡಿಎಸ್‌ ಶಾಸಕರು ಬಿಜೆಪಿಗೆ? ಚುನಾವಣೆಗಿಂತ ಮೊದಲೇ ಕರ್ನಾಟಕದಲ್ಲಿ ಆಪರೇಷನ್ ಕಮಲ ಆರಂಭವಾಗಿದೆಯೇ?. ಹೌದು, ಇಂತಹ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಏಳು ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸಿದೆ. 150 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಬಿಜೆಪಿ ಹಲವಾರು ತಂತ್ರಗಳನ್ನು ಮಾಡುತ್ತಿದೆ. ಸ್ವಂತ ಶಕ್ತಿಯ ಮೇಲೆ ಗೆಲ್ಲಲು ಸಾಧ್ಯವಿಲ್ಲದ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.ಕೆಲವು ಜೆಡಿಎಸ್ ಶಾಸಕರ ಜೊತೆ ಬಿಜೆಪಿ ನಾಯಕರು ಈಗಾಗಲೇ ಮಾತುಕತೆ ನಡೆಸಿದ್ದಾರೆ. ಆದರೆ, ಯಾವುದೇ ಶಾಸಕರು ಬಿಜೆಪಿಗೆ ಬರುವ ಕುರಿತು ತೀರ್ಮಾನವನ್ನು ಹೇಳಿಲ್ಲ. ಬಿಜೆಪಿ ನಾಯಕರು ಚುನಾವಣೆ ಹತ್ತಿರವಾಗುವಾಗ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದೆ.ಬಿಜೆಪಿ ಈಗಾಗಲೇ 'ನವ ಕರ್ನಾಟಕ ಪರಿವರ್ತನಾ ಯಾತ್ರೆ' ಮೂಲಕ ರಾಜ್ಯ ಪ್ರವಾಸ ನಡೆಸುತ್ತಿದೆ. ಜನವರಿಯಲ್ಲಿ ಈ ಯಾತ್ರೆ ಅಂತ್ಯಗೊಳ್ಳಲಿದ್ದು, ನಂತರ ಟಿಕೆಟ್ ಹಂಚಿಕೆಯತ್ತ ಗಮನ ಹರಿಸಲಿದೆ. ಆಪರೇಷನ್ ಕಲಮಕ್ಕೆ ಯಾವ ಶಾಸಕರು?...

Share This Video


Download

  
Report form
RELATED VIDEOS