Karnataka Elections 2018 :ಶ್ರೀರಂಗಪಟ್ಟಣ ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳು | Oneindia Kannada

Oneindia Kannada 2017-11-28

Views 5

Ramesh Bandi Siddegowda, M. Putte Gowda, Indavalu Sachindanada aspirants for Karnataka assembly elections 2018 ticket in Srirangapatna constituency, Mandya.

ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಮೂವರು ಆಕಾಂಕ್ಷಿಗಳು! ಚುನಾವಣೆ ಘೋಷಣೆಯಾಗುವ ಮೊದಲೇ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗೆ ಮೂವರು ಆಕಾಂಕ್ಷಿಗಳಿದ್ದಾರೆ. ಮತ್ತೊಂದು ಕಡೆ ಜೆಡಿಎಸ್ ಮತ್ತು ಬಿಜೆಪಿ ಕ್ಷೇತ್ರದ ಮೇಲೆ ಕಣ್ಣಿಟ್ಟಿವೆ. ಮಂಡ್ಯ ಜಿಲ್ಲೆಯ ರಾಜಕಾರಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಜಿಲ್ಲಾ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಬಹಿರಂಗ ಸತ್ಯ. ಅಂಬರೀಶ್ ಮತ್ತು ರಮ್ಯಾ ಇಬ್ಬರೂ ಜಿಲ್ಲೆಯ ರಾಜಕಾರಣದತ್ತ ಅಷ್ಟಾಗಿ ಗಮನ ಹರಿಸಿಲ್ಲ.ರಮ್ಯಾ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ. ಅಂಬರೀಶ್ ಜೆಡಿಎಸ್ ಸೇರಲಿದ್ದಾರೆ ಎನ್ನುವ ಸುದ್ದಿಗಳು ರಾಜಕೀಯ ವಲಯದಲ್ಲಿ ಹಬ್ಬಿದ್ದವು. ಆದರೆ, ಜಿಲ್ಲಾ ಜೆಡಿಎಸ್ ನಾಯಕರು ಈ ಸುದ್ದಿಗಳನ್ನು ತಳ್ಳಿಹಾಕಿದ್ದಾರೆ.ಚನ್ನಪಟ್ಟಣ ಶಾಸಕ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ ಜಿಲ್ಲೆಯಲ್ಲಿ ಪಕ್ಷದ ನೆಲೆ ಭದ್ರಗೊಳಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ತಂತ್ರ ರೂಪಿಸಿದ್ದಾರ.

Share This Video


Download

  
Report form
RELATED VIDEOS