ಪರೇಶ್ ಮೇಸ್ತಾ ಕೇಸ್ : ಸ್ಪಷ್ಟೀಕರಣ ನೀಡಿದ ಡಾ. ಜಿ ಪರಮೇಶ್ವರ್ | Oneindia Kannada

Oneindia Kannada 2017-12-12

Views 18

ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣ ಖಂಡಿಸಿ ಇಂದು ಹಿಂದೂ ಸಂಘಟನೆಗಳು ಶಿರಸಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಚ್, ಅಶ್ರುವಾಯು ಪ್ರಯೋಗಿಸಿದರು. ಗಲಭೆಯಲ್ಲಿ ಇಬ್ಬರು ಪತ್ರಕರ್ತರು ಗಾಯಗೊಂಡಿದ್ದಾರೆ. ಜತೆಗೆ 6 ವಾಹನಗಳು ಕಲ್ಲು ತೂರಾಟಕ್ಕೆ ಜಖಂಗೊಂಡಿವೆ.ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ತಡೆದಾಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಒಂದು ಹಂತದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸೂಚನೆ ದೊರೆತ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಜತೆಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಹಲವಾರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಶಿರಸಿಯ ವಿಕಾಸ ಆಶ್ರಮ ಮೈದಾನದ ಮುಂದೆ ಸೇರಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಸಕ ವಿಶ್ವೇಶರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಪ್ರತಿಭಟನೆಗಿಳಿದರು. ಇನ್ನು ಈ ಪ್ರಕರಣದ ಬಗ್ಗೆ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆಯನ್ನ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.
Sirsi bundh, called by the Hindu organizations, has turned to violence. The bundh was called on to condemn Paresh Mesta's death. Two people injured and more than 6 vehicles damaged in the violent protest. Dr. G Parameshwar reacts about this situation & gives clarification about Paresh Mesta Case. Watch Video to know more.

Share This Video


Download

  
Report form
RELATED VIDEOS