Home Minister Ramalinga Reddy meets chief minister Siddaramaiah over Kumta incident. Ramalinga Reddy informs CM over prevailing situation in Uttara Kannada for Hindu activist Paresh Mesta death.
ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.ಉತ್ತರ ಕನ್ನಡದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಬಗ್ಗೆ ಕೆಲ ಹೊತ್ತು ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, "ಇದು ಉದ್ದೇಶ ಪೂರ್ವಕವಾದ ಗಲಾಟೆ. ಬಿಜೆಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಪ್ರಯತ್ನಿಸುತ್ತಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯದೆಲ್ಲಡೆ ಪ್ರತಿಭಟನೆ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಳೆದೆರಡು ತಿಂಗಳಲ್ಲಿ ಬಿಜೆಪಿ ಎಂಟು ಪ್ರತಿಭಟನೆಗಳನ್ನು ಮಾಡಿದ್ದು, ಕಾನೂನು ಹದಿಗೆಡಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಉತ್ತರ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥತಿ ನಿರ್ಮಾಣವಾಗಿದ್ದರಿಂದ ಬಗ್ಗೆ ಮಾತನಾಡಲು ಇಂದು (ಮಂಗಳವಾರ) ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದಿರುವುದಾಗಿ ರಾಮಲಿಂಗಾ ರೆಡ್ಡಿ ತಿಳಿಸಿದರು.