Ramdurg, Savadatti and Baila Hongala taluk of belgaum district have hit following bandh call by farmers urging to resolve Mahadayi river dispute.
ಮಹದಾಯಿ ನೀರನ್ನು ಉತ್ತರ ಕರ್ನಾಟಕಕ್ಕೆ ಹರಿಸಲು ಕೇಂದ್ರ, ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ರೈತ ಸಂಘಟನೆಗಳು ಬೆಳಗಾವಿಯಲ್ಲೂ ಕೂಡ ಪ್ರತಿಭಟನೆ ನಡೆಸುತ್ತಿದ್ದಾರೆ.ಜಿಲ್ಲೆಯ ರಾಮದುರ್ಗ, ಸವದತ್ತಿ ಹಾಗೂ ಬೈಲಹೊಂಗಲ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ರಜೆ ಘೋಷಿಸಿ ಆದೇಶ ನೀಡಿದ್ದಾರೆ. ಬಂದ್ ಹಿನ್ನೆಲೆ ಬುಧವಾರ ನಡೆಯಬೇಕಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.BE/17 EME14 ವಿಷಯ ಡಿಸೆಂಬರ್ 29ಕ್ಕೆ ಮತ್ತು ಉಳಿದ ವಿಷಯದ ಪರೀಕ್ಷೆಗಳನ್ನು ಜನವರಿ ೮ನೇ ತಾರೀಖಿಗೆ ವಿಟಿಯು ಮುಂದೂಡಿದೆ. ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ವಿವಿಧ ಕನ್ನಡಪರ ಮತ್ತು ಸಂಘ ಸಂಸ್ಥೆಗಳ ಬೆಂಬಲಿಸಿ ಹೋರಾಟಕ್ಕೆ ಧುಮುಕಿದೆ.ಮಹಾದಾಯಿಗಾಗಿ ಉತ್ತರ ಕರ್ನಾಟಕ ಬಂದ್ ಹಿನ್ನೆಲೆ ಬೈಲಹೊಂಗಲ ಪಟ್ಟಣ ಸಂಪೂರ್ಣ ಸ್ತಬ್ದವಾಗಿದೆ. ಬೈಲಹೊಂಗಲದಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿ ಬಂದ್ ಗೆ ಅಂಗಡಿ ಮಾಲಿಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಬಂದ್ ಆಗಿದೆ.