ರಾಮ್ ಗೋಪಾಲ್ ವರ್ಮಾ ಟ್ವಿಟ್ಟರ್ ಗೆ ವಾಪಸ್ ,ಬಂದ ಕೂಡಲೇ ರಜಿನಿ ರಾಜಕೀಯ ಪ್ರವೇಶದ ಬಗ್ಗೆ ಟ್ವೀಟ್ |Filmibeat Kannada

Filmibeat Kannada 2018-01-03

Views 1.3K

ಜನಪ್ರಿಯ, ವಿವಾದಾತ್ಮಕ ಚಿತ್ರಕರ್ಮಿ ರಾಮ್‌ ಗೋಪಾಲ್ ವರ್ಮಾ ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಗೆ ರೀ ಎಂಟ್ರಿ ಕೊಟ್ಟಿದ್ದಾರೆ. ಟ್ವಿಟ್ಟರ್ ಗೆ ಬಂದ ವರ್ಮಾ, ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಜನಿಕಾಂತ್‌ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವುದನ್ನು ಸ್ವಾಗತಿಸಿದ್ದಾರೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ಎಲ್ಲ ಜನರು ರಜನಿಗೆ ಮಾತ್ರ ವೋಟ್ ಮಾಡಲಿದ್ದಾರೆ ಎಂದಿದ್ದಾರೆ. ಬಾಲಿವುಡ್, ಕಾಲಿವುಡ್, ಟಾಲಿವುಡ್ ನಲ್ಲಿ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ರಾಮ್ ಗೋಪಾಲ್ ವರ್ಮಾ ಅವರು ವಿವಾದಾತ್ಮಕ ಟ್ವೀಟ್ ಮಾಡುವುದರಲ್ಲಿ ಎತ್ತಿದ ಕೈ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಪರಾಧಿ ಎನಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವುದನ್ನು ಲೇವಡಿ ಮಾಡಿ ಟ್ವೀಟ್ ಮಾಡಿದ್ದು ಭಾರಿ ಸುದ್ದಿಯಾಗಿತ್ತು.

Ram Gopal Varma has made a come back to twitter after a long gap . And his tweet on Rajinikanth's political entry has caught all eyes

Share This Video


Download

  
Report form
RELATED VIDEOS