State BJP president BS Yeddyurappa defined that the people of the state have been endorsed the statement by prime minister Narendra modi as congress government is ten percent commission government.
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆಯನ್ನು ರಾಜ್ಯದ ಜನತೆ ಮುಕ್ತಕಂಠದಿಂದ ಪ್ರಶಂಸಿಸಿ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಣ್ಣಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿಯುವಂತೆ 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿಯವರು ಪರಿವರ್ತನಾ ಸಮಾವೇಶದಲ್ಲಿ ಕಟುವಾಗಿ ಟೀಕಿಸಿದ್ದರು.