Rajeev Chandrasekhar on twitter responded to Congress social media head Divya Spandana aka Ramya.
ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕದಲ್ಲಿ ಸಾಕಷ್ಟು ಕೆಸರೆರಚಾಟ ಆರಂಭವಾಗಿದೆ. ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ್ ಸಾಲು ಸಾಲು ಟ್ವೀಟ್ ಗಳನ್ನು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ, "ಇಲ್ಲಿ ಸಂಪೂರ್ಣ ಪಟ್ಟಿ ಇದೆ. ಇದಕ್ಕೆ ನಿಮ್ಮಿಂದ ಉತ್ತರ ಬೇಕಾಗಿದೆ," ಎಂದು ಟ್ಟೀಟ್ ಮಾಡಿದ್ದರು.