ಎಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನನ್ನ ಅಭ್ಯಂತರವಿಲ್ಲ ಎಂದು ಎಚ್.ಡಿ. ದೇವೇಗೌಡ ಅವರು ಸುಳಿವು ನೀಡಿದರು. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಗಳಿಲ್ಲ. ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ, ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಪಕ್ಷದಿಂದ ಯಾವುದೇ ತಡೆ ಇಲ್ಲ. ಈ ಹಿಂದೆ ನಾನೂ ಕೂಡ ಸಾತನೂರು ಮತ್ತು ಹೊಳೆನರಸೀಪುರದಿಂದ ಸ್ಪರ್ಧಿಸಿದ್ದೆ ಎಂದು ಅವರು ಹೇಳಿದರು.
JDS supremo HD Devegowda hinted that former Chief minister HD Kumaraswamy will contest from Channapatna and Ramanagar in coming state assembly elections.