ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಐದಕ್ಕೆ ಐದೂ ಕ್ಷೇತ್ರಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಿತ್ತು. ಆ ಮೂಲಕ, ಬಿಜೆಪಿ ಭರ್ಜರಿಯಾಗಿ ತನ್ನ ಕೋಟೆಯನ್ನು ಮರುವಶ ಮಾಡಿಕೊಂಡಿತ್ತು. ಕಾರ್ಕಳ ಮತ್ತು ಕುಂದಾಪುರದಲ್ಲಿ ಬಿಜೆಪಿಗೆ ನಿರಾಯಾಸ ಗೆಲುವು, ಇನ್ನುಳಿದ ಉಡುಪಿ, ಬೈಂದೂರು ಮತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಇರಲಿದೆ ಎನ್ನುವ ಮಾತು ಚಾಲ್ತಿಯಲ್ಲಿತ್ತು. ಆದರೆ, ಈ ಎಲ್ಲಾ ಲೆಕ್ಕಾಚಾರ ಉಲ್ಟಾ ಹೊಡೆದು ಬಿಜೆಪಿ ಎಲ್ಲಾ ಕ್ಷೇತ್ರದಲ್ಲಿ ಜಯಗಳಿಸಿತ್ತು.