ಮೈಸೂರು, ಜುಲೈ.20: ಮೊದಲ ಆಷಾಢ ಶುಕ್ರವಾರ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮುಂಜಾನೆಯಿಂದಲೇ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಶೇಷ ಪೂಜೆ ಸಲ್ಲಿಕೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು, ನಾಡ ಅಧಿದೇವತೆಯನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿದೆ. ದೇವಾಲಯದ ಸುತ್ತಲೂ ಬಣ್ಣ ಬಣ್ಣದ ಹೂವಿನ ಅಲಂಕಾರ ಮಾಡಲಾಗಿದೆ.