Campaign in all five constituencies will come to end by October 31. For the next 48 hours political parties can make door to door campaign to appeal the voters.
ರಾಜ್ಯದ ಐದು ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರ ಬುಧವಾರ ರಾತ್ರಿಗೆ ಕೊನೆಗೊಳ್ಳಲಿದ್ದು, ಮುಂದಿನ ಎರಡು ದಿನಗಳ ಕಾಲ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಕಳೆದ ಹದಿನೈದು ದಿನಗಳಿಂದ ಕಾಂಗ್ರೆಸ್ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಐದು ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.