ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಜ್ಞಾತ ಸ್ಥಳದಿಂದ ವಿಡಿಯೋ ಮುದ್ರಣ ಮಾಡಿ ಮಾಧ್ಯಮಗಳಿಗೆ ರವಾನೆ ಮಾಡಿದ್ದಾರೆ. ವಕೀಲ ಚಂದ್ರಶೇಖರ್ ಅವರೊಂದಿಗೆ ಜನಾರ್ದನ ರೆಡ್ಡಿ ಈ ವಿಡಿಯೋ ತುಣುಕಿನಲ್ಲಿ ಕಾಣಿಸಿಕೊಂಡಿದ್ದಾರೆ. ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ವಕೀಲರ ಮೂಲಕ ನೋಟಿಸ್ ಜಾರಿ ಮಾಡಿರುವುದರಿಂದ ಇಂದೇ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ಜನಾರ್ದನ ರೆಡ್ಡಿ ಮಾಹಿತಿ ನೀಡಿದ್ದಾರೆ.