D K Suresh, Bengaluru Rural candidate declared his assets & liabilities. Bengaluru Rural Constituency Congress candidate D K Suresh is the richest candidate of Karnataka. Here is the detail of his total assets.
ಅಕ್ರಮ ಹಣ ಹೂಡಿಕೆ, ಆದಾಯ ತೆರಿಗೆ ವಂಚನೆಗಳ ಆರೋಪ ಕೊರಳಿಗೆ ಸುತ್ತಿಸಿಕೊಂಡಿರುವ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಡಿ.ಕೆ.ಸುರೇಶ್ ಅವರು ನಾಮಪತ್ರವನ್ನು ಸಲ್ಲಿಸಿದ್ದು, ಆಸ್ತಿ ವಿವರವನ್ನು ಸಹ ಸಲ್ಲಿಸಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ ಈ ವರೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಡಿ.ಕೆ.ಸುರೇಶ್ ಅವರ ಆಸ್ತಿಯೇ ಹೆಚ್ಚು ಇದೆ.