H Vishwanath on Tuesday resigned to the JDS state President post, on the moral ground of party's huge defeat in Lok Sabha Elections 2019.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ಅವರು ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ . ದೇವೇಗೌಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.