ದೇಶದ ಖಾಸಗಿ ವಲಯದ ದೊಡ್ಡ ಬ್ಯಾಂಕ್ ಆಗಿರುವ ಐಸಿಐಸಿಐ ಬ್ಯಾಂಕ್ ಹೊಸ ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಇದು ವಿಶೇಷವಾಗಿ ಎಂಎಸ್ಎಂಇ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ಮತ್ತು ಸ್ವಯಂ ಉದ್ಯೋಗಿ ಗ್ರಾಹಕರಿಗೆ ಬ್ಯಾಂಕಿಂಗ್ ವಹಿವಾಟುಗಳನ್ನು ಡಿಜಿಟಲ್ ಮತ್ತು ತ್ವರಿತವಾಗಿ ಕೈಗೊಳ್ಳಲು ಅನುವು ಮಾಡಿಕೊಡುತ್ತದೆ.