ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಲು ಎಸಿಬಿ ಅಧಿಕಾರಿಗಳು ಒತ್ತಡ ಹೇರಿದ್ದರು ಎಂದು ಕೆಎಸ್ ಆದಿಕಾರಿ ಆರೋಪಿಸಿದ ಬೆನ್ನಲ್ಲೇ ಇದರ ವಿರುದ್ಧ ಹೋರಾಟ ನಡೆಸಿದ್ದ ಬಿಜೆಪಿ ನಾಯಕರು, ಇವತ್ತು ರಾಜ್ಯಪಾಲರಿಗೆ ಸಿಎಂ ವಿರುದ್ಧ ದೂರು ನೀಡಿದ್ದಾರೆ. ಕೇಂದ್ರ ಸಚಿವ ಅನಂತ್ ಕುಮಾರ್ ನೇತೃತ್ವದಲ್ಲಿ ಶೇಟ್ಟರ್, ಈಶ್ವರಪ್ಪ ಸೇರಿದಂತೆ ಹಲವು ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.