ದೇಶದಲ್ಲಿ ಆಟೋ ಮೊಬೈಲ್ ಕಂಪನಿಗಳು ನಿಯಮ ಮೀರಿ ಬಿಎಸ್ 4 ವಾಹನಗಳನ್ನು ಮಾರಾಟ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಫಾಡಾ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿದೆ.
ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿಗೆ ವಿರುದ್ಧವಾಗಿ ಆಟೋಮೊಬೈಲ್ ಕಂಪನಿಗಳು ಬಿಎಸ್ 4 ವಾಹನಗಳನ್ನು ಮಾರಾಟ ಮಾಡಿವೆ. ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಈ ಹಿಂದೆಯೇ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತ್ತು. ಜುಲೈ 31ರಂದು ಬಿಎಸ್ 4 ವಾಹನಗಳ ನೋಂದಣಿಗೆ ಸಂಬಂಧಿಸಿದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಮಂಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಸುಪ್ರೀಂ ಕೋರ್ಟಿನಲ್ಲಿ ಫಾಡಾ ಸಲ್ಲಿಸಿರುವ ಅರ್ಜಿ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.