ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.99.30 ಲಕ್ಷಗಳಾಗಿದೆ.
ಈ ಬೆಲೆಯು ಮೊದಲ 50 ಯುನಿಟ್ ಗಳಿಗೆ ಮಾತ್ರ ಅನ್ವಯಿಸಲಿದೆ. ಈ ಬೆಲೆ ವಾಲ್-ಮೌಂಟ್ ಚಾರ್ಜರ್ ಅನ್ನು ಸಹ ಒಳಗೊಂಡಿದೆ. ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಬಹು ಹಿಂದೆಯೇ ಭಾರತದಲ್ಲಿ ಬಿಡುಗಡೆಯಾಗಬೇಕಿತ್ತು.
ಕರೋನಾ ವೈರಸ್ ಭೀತಿಯಿಂದಾಗಿ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬಿಡುಗಡೆಯನ್ನು ಮುಂದೂಡಲಾಗಿತ್ತು. ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ವಿಭಿನ್ನವಾದ ಸೈಲಿಂಗ್ ಅನ್ನು ಹೊಂದಿದೆ.