ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ನಟನೆಯ ಎರಡನೇ ಸಿನಿಮಾ 'ಬ್ಯಾಡ್ ಮ್ಯಾನರ್ಸ್' ಮುಹೂರ್ತ ಇಂದು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನೆರವೇರಿದೆ. ದುನಿಯಾ ಸೂರಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಪಾಲ್ಗೊಂಡಿದ್ದರು. 'ಬ್ಯಾಡ್ ಮ್ಯಾನರ್ಸ್' ಮುಹೂರ್ತ ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಬಹುದು ಎಂಬ ನಿರೀಕ್ಷೆ ಇತ್ತು. ಮುಹೂರ್ತದಲ್ಲಿ ಡಿ ಬಾಸ್ ಇರಲಿಲ್ಲ. ಆದ್ರೆ, ಚಿತ್ರದ ಸೆಟ್‌ಗೆ ಭೇಟಿ ನೀಡಿದ ಚಾಲೆಂಜಿಂಗ್ ಸ್ಟಾರ್, ಅಭಿಷೇಕ್ ಹಾಗೂ ಸೂರಿ ಅವರಿಗೆ ಶುಭಕೋರಿದ್ದಾರೆ.
Challenging star Darshan has visited Bad Manners Movie set at Mysore and he wishes to actor Abhishek ambareesh and director Suri.