ವಿಶ್ವಾದ್ಯಂತ 1 ಕೋಟಿ ಯುನಿಟ್'ಗಳು ಮಾರಾಟವಾಗುವ ಮೂಲಕ ರೇಂಜ್ ರೋವರ್ ಸ್ಪೋರ್ಟ್ ಕಾರು ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಈ ಬಗ್ಗೆ ಜಾಗ್ವಾರ್ ಲ್ಯಾಂಡ್ ರೋವರ್ (ಜೆಎಲ್ಆರ್) ಕಂಪನಿಯು ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದೆ.
ರೇಂಜ್ ರೋವರ್ ಸ್ಪೋರ್ಟ್ ಕಾರನ್ನು ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಗೊಳಿಸಲಾಯಿತು. ಕಂಪನಿಯು 2020ರ ಕೊನೆಯಲ್ಲಿ ಎಂವೈ 2021 ರೇಂಜ್ ರೋವರ್ ಸ್ಪೋರ್ಟ್ ಕಾರ್ ಅನ್ನು ಬಿಡುಗಡೆಗೊಳಿಸಿತು.
ರೇಂಜ್ ರೋವರ್ ಸ್ಪೋರ್ಟ್ ಕಾರಿನ ಆರಂಭಿಕ ಬೆಲೆ ಎಕ್ಸ್ ಶೋರೂಂ ದರದಂತೆ ರೂ.89.13 ಲಕ್ಷಗಳಾಗಿದ್ದು, ಟಾಪ್ ಎಂಡ್ ಮಾದರಿಯ ಬೆಲೆ ರೂ.1.43 ಕೋಟಿಗಳಾಗಿದೆ.
ರೇಂಜ್ ರೋವರ್ ಸ್ಪೋರ್ಟ್ ಕಾರಿನ ಮಾರಾಟದ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.