ಟ್ರಯಂಫ್ ಮೋಟರ್ ಸೈಕಲ್ಸ್ ಕಂಪನಿಯು ತನ್ನ ಹೊಸ ಟೈಗರ್ 850 ಸ್ಪೋರ್ಟ್ ಬೈಕ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕಿನ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.11.95 ಲಕ್ಷಗಳಾಗಿದೆ.
ಈ ಬೈಕ್ ಕಂಪನಿಯ ಹೊಸ ಎಂಟ್ರಿ ಲೆವೆಲ್ ಅಡ್ವೆಂಚರ್ ಟೂರರ್ ಬೈಕ್ ಆಗಿದ್ದು, ಟೈಗರ್ 900 ಬೈಕಿನ ಕೆಳಗಿನ ಸ್ಥಾನದಲ್ಲಿರಲಿದೆ. ಈ ಬೈಕಿನಲ್ಲಿರುವ 888 ಸಿಸಿ ಇನ್-ಲೈನ್ ತ್ರೀ -ಸಿಲಿಂಡರ್ ಎಂಜಿನ್ 8500 ಆರ್‌ಪಿಎಂನಲ್ಲಿ 85 ಬಿಹೆಚ್‌ಪಿ ಪವರ್ ಹಾಗೂ 6500 ಆರ್‌ಪಿಎಂನಲ್ಲಿ 82 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಹೊಸ ಟೈಗರ್ 850 ಸ್ಪೋರ್ಟ್ ಬೈಕ್ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.