ರೆನಾಲ್ಟ್ ಕಂಪನಿಯು ಕೆಲವು ದಿನಗಳ ಹಿಂದಷ್ಟೇ ತನ್ನ ಕಿಗರ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಕಾಂಪ್ಯಾಕ್ಟ್ ಎಸ್‌ಯುವಿಯ ಆರಂಭಿಕ ಬೆಲೆ ಎಕ್ಸ್ ಶೋರೂಂ ದರದಂತೆ ರೂ.5.45 ಲಕ್ಷಗಳಾದರೆ, ಟಾಪ್ ಎಂಡ್ ಆರ್‌ಎಕ್ಸ್ ಝಡ್ ಎಕ್ಸ್-ಟ್ರಾನಿಕ್ ಸಿವಿಟಿ ಮಾದರಿಯ ಬೆಲೆ ಎಕ್ಸ್ ಶೋರೂಂ ದರದಂತೆ ರೂ.9.55 ಲಕ್ಷಗಳಾಗಿದೆ. ರೂ.11,000 ಪಾವತಿಸಿ ಈ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಬುಕ್ಕಿಂಗ್ ಮಾಡಬಹುದು.
ಇತ್ತೀಚಿಗೆ ನಾವು ಹೊಸ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಚಾಲನೆ ಮಾಡಿದೆವು. ಈ ಎಸ್‌ಯುವಿಯಲ್ಲಿರುವ ಹಲವಾರು ಫೀಚರ್'ಗಳು ನಮ್ಮನ್ನು ಆಕರ್ಷಿಸಿದವು. ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‌ಯುವಿಯ ಫಸ್ಟ್ ಡ್ರೈವ್ ಬಗೆಗಿನ ಸಂಪೂರ್ಣ ವಿವರಗಳನ್ನು ಈ ವೀಡಿಯೊದಲ್ಲಿ ನೋಡೋಣ.