ಮಂಡ್ಯ ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನದ ಚುನಾವಣೆ
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ರವಿಕುಮಾರ್ ಚಾಮಲಪುರ
ಮತನೀಡುವಂತೆ ಮನವಿ ಮಾಡಿದ ಡಾ.ಪ್ರದೀಪ್ ಕುಮಾರ್ ಹೆಬ್ರಿ
21-11-2021ರ ಭಾನುವಾರ ನಡೆಯಲಿದೆ ಚುನಾವಣೆ
ಮಂಡ್ಯ: ಸುಮಾರು 160ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಡಾ.ಪ್ರದೀಪ್ ಕುಮಾರ್ ಹೆಬ್ರಿ ಅವರು, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ರವಿಕುಮಾರ್ ಚಾಮಲಪುರ ಅವರಿಗೆ ಮತ ನೀಡುವ ಮೂಲಕ ಬಹುಮತಗಳಿಂದ ಗೆಲ್ಲಿಸಬೇಕೆಂದು ಮಂಡ್ಯ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರಲ್ಲಿ ಪ್ರಾರ್ಥನೆ ಮಾಡಿದ್ದಾರೆ.