ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ
ತುಮಕೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಪುಣ್ಯ ಸ್ಮರಣೆ ಅಂಗವಾಗಿ ದಾಸೋಹ ದಿನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು. ಈ ವೇಳೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಮತ್ತು ಇತರರು ಹಾಜರಿದ್ದರು.
#ದಾಸೋಹದಿನ