ರಿಷಬ್ ಶೆಟ್ಟಿ ಫಿಲ್ಮ್ಸ್‌ನಿಂದ ನಿರ್ಮಾಣಗೊಂಡಿರುವ ಸಿನಿಮಾ 'ಪೆದ್ರೊ'. ಈ ಸಿನಿಮಾ ಕಳೆದ ಕೆಲವು ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ. ಚಿತ್ರದ ಟ್ರೈಲರ್ ನೋಡಿದ ಸಿನಿಪ್ರಿಯರು ಪ್ರಶಂಸೆ ಮಾತುಗಳನ್ನು ಆಡಿದ್ದರು. ಇತ್ತೀಚೆಗೆ ಹಿರಿಯ ಸಿನಿಮಾ ನಿರ್ದೇಶಕ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತರಾದ ಗಿರೀಶ್ ಕಾಸರವಳ್ಳಿ ಕೂಡ 'ಪೆದ್ರೊ' ಸಿನಿಮಾವನ್ನು ಹೊಗಳಿ ಕೊಂಡಾಡಿದ್ದರು. ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿಯೂ ಈ ಸಿನಿಮಾ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಅದೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಷ್ಟಿತ ಬೆಂಗಳೂರು ಚಲನ ಚಿತ್ರೋತ್ಸವಕ್ಕೆ 'ಪೆದ್ರೊ' ಆಯ್ಕೆಯಾಗಿಲ್ಲ. ಈ ವಿಚಾರಕ್ಕೆ ರಿಷಬ್ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
Rishabh Shetty angry towards Bengaluru film festival for not showing Pedro Movie.