ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಫೈರಿಂಗ್..! | KGF Chapter 2 | Haveri
#PublicTV #CMBasavarajBommai #KGFChapter2
ಕೆಜಿಎಫ್ ಚಲನಚಿತ್ರ ವೀಕ್ಷಣೆ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಪ್ರೇಕ್ಷಕನೋರ್ವ ಫೈರಿಂಗ್ ಮಾಡಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ನಡೆದಿದೆ. ಸಿನಿಮಾ ನೋಡುವ ವೇಳೆಯಲ್ಲಿ ಕಾಲು ಸರಿಸಿಕೊಂಡು ಕುಳಿತುಕೊಳ್ಳಲು ಹೇಳಿದಾಗ ಮಾತಿಗೆ ಮಾತು ಬೆಳೆದು ಕಿಡಿಗೇಡಿ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾನೆ. ವಸಂತಕುಮಾರ ಎಂಬಾತನ ಹೊಟ್ಟೆಯ ಭಾಗಕ್ಕೆ ೨ ಗುಂಡುಗಳು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಾವೇರಿ ಎಸ್ಪಿ ಹನುಮಂತರಾಯ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ರು.