ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಆಯ್ಕೆಯಾಗಿದ್ದಾರೆ. ಅವರು ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿ 2000ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017ರಲ್ಲಿ ಕೆ. ರತ್ನಪ್ರಭಾ ಅಲಂಕರಿಸಿದ್ದರು. ರತ್ನಪ್ರಭಾ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ 2 ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದದ್ದು ಗಮನಾರ್ಹವಾಗಿತ್ತು.
#HRRanganath #NewsCafe #PublicTV #VanditaSharma