ಭಾಗಮಂಡಲ- ನಾಪೋಕ್ಲು ರಸ್ತೆ ಸಂಚಾರ ಬಂದ್ | Public TV

Public TV 2022-07-03

Views 3

ಮಡಿಕೇರಿಯಲ್ಲಿ ಒಂದ್ಕಡೆ ಭೂತಾಯಿ ಮತ್ತೊಂದು ಕಡೆ ವರುಣ ಮುನಿಸಿಕೊಂಡಂತೆ ಕಾಣ್ತಿದೆ. ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ಭಾರೀ ಮಳೆಯಾದ ಪರಿಣಾಮ ಭಾಗಮಂಡಲ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆ ಸಂಚಾರ ಬಂದ್ ಆಗಿದೆ. ರಸ್ತೆ ಮೇಲೆ 2 ಅಡಿಯಷ್ಟು ನೀರು ನಿಂತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರಿನಲ್ಲೇ ವಾಹನಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನು ಮಳೆಯಿಂದ ಕೋರಂಗಾಲದ ವಾಜಪೇಯಿ ವಸತಿ ಶಾಲೆಯ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆ, ಶಾಲೆಗೆ 8 ದಿನಗಳ ಕಾಲ ರಜೆ ಘೋಷಿಸಲಾಗಿದೆ. ತಮ್ಮ ಊರುಗಳಿಗೆ ತೆರಳುತ್ತಿರುವ ವಿದ್ಯಾರ್ಥಿಗಳು ಪ್ರವಾಹದ ನೀರು ದಾಟುವ ಅಪಾಯದ ದೃಶ್ಯ ನಿಜಕ್ಕೂ ಬೆಚ್ಚಿ ಬೀಳಿಸುವಂತಿತ್ತು. ಸದ್ಯ ಭಾಗಮಂಡಲದ ಪ್ರವಾಹದ ಸ್ಥಳದಲ್ಲಿ ಪೊಲೀಸ್ ಮತ್ತು ಹೋಂ ಗಾಡ್ರ್ಸ್ ನಿಯೋಜನೆ ಮಾಡಲಾಗೊದ್ದು, ರೋಪ್ ಬಳಸಿ ಜನರ ಓಡಾಟಕ್ಕೆ ಅನುವು ಮಾಡಿಕೊಡಲಾಗ್ತಿದೆ.

#publictv #kodagu #rain

Share This Video


Download

  
Report form