ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಕೂದಲೆಳೆ ಅಂತರದಲ್ಲಿ ನಾಲ್ವರು ಪಾರು

ETVBHARAT 2025-07-12

Views 33

ದಾವಣಗೆರೆ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ನಡೆದಿದೆ. ಗೋವಾದಿಂದ ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ದಾವಣಗೆರೆ ಗ್ರಾಮಾಂತರ ಪೊಲೀಸ್​ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. 

ಹೋಟೆಲ್​​ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ(ರಾಯಚೂರು): ಮತ್ತೊಂದೆಡೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಹೋಟೆಲ್​ ಹೊತ್ತಿ ಉರಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಇಂದು (ಜು.12) ನಡೆದಿದೆ. ಗ್ರಾಮದ ನಿವಾಸಿ ವೀರೇಶಸ್ವಾಮಿ ಎಂಬುವರಿಗೆ ಸೇರಿದ ಹೋಟೆಲ್​ನಲ್ಲಿ ಈ ಅವಘಡ ಸಂಭವಿಸಿದೆ. 

ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಹೋಟೆಲ್​ ಮಾಲೀಕ ತಕ್ಷಣ ಗ್ರಾಹಕರನ್ನು ಹೊರಗಡೆ ಕಳುಹಿಸಿ, ಬಳಿಕ ತಾನು ಹೊರ ಬಂದಿದ್ದಾನೆ. ಬಳಿಕ ಸಿಲಿಂಡರ್ ಸ್ಫೋಟಗೊಂಡಿದ್ದು, ಭಾರೀ ಅನಾಹುತ ತಪ್ಪಿದೆ. ಸ್ಫೋಟದ ರಭಸಕ್ಕೆ ಶೆಡ್ ಕಿತ್ತು ಹೋಗಿದೆ. ಇನ್ನು ಬೆಂಕಿಯ ಕೆನ್ನಾಲಿಗೆಗೆ ವಸ್ತುಗಳು ಬೆಂಕಿಗಾಹುತಿಯಾಗಿವೆ. ಗ್ರಾಮಸ್ಥರು ಅಗ್ನಿಶಾಮಕ ದಳ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದನ್ನೂ ಓದಿ: ಕಲಬುರಗಿ ಬೆಂಕಿ ಅವಘಡ: ಹಲವು ಅಂಗಡಿ ಸುಟ್ಟು ಲಕ್ಷಾಂತರ ಮೌಲ್ಯದ ವಸ್ತು ನಾಶ

ಇದನ್ನೂ ಓದಿ: ಸಾಲ ವಾಪಸ್ ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ!

Share This Video


Download

  
Report form
RELATED VIDEOS