ಹಳ್ಳಕ್ಕೆ ಬಿದ್ದ ಬಸ್, ಅದೃಷ್ಟವಶಾತ್ ತಪ್ಪಿದ ಅನಾಹುತ: ವಿಡಿಯೋ

ETVBHARAT 2025-09-02

Views 69

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಸೇತುವೆ ಮೇಲಿಂದ ಹಳ್ಳಕ್ಕೆ ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಅಣಜಿಗೆರೆ ಗ್ರಾಮದ ಬಳಿ ನಡೆದಿದೆ. 

ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಐದಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಾವಣಗೆರೆಯಿಂದ ಅರಸೀಕೆರೆ ಕಡೆ ಖಾಸಗಿ ಬಸ್‌ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ. 

ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬಸ್ ಹಳ್ಳಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಬಸ್ಸಿನಿಂದ ಕಿಟಕಿಗಳಲ್ಲಿ ಜನರು ಹೊರ ಬರುತ್ತಿರುವುದು ಮತ್ತು ಬಸ್ಸಿನಡಿಯಲ್ಲಿ ಓರ್ವ ಪ್ರಯಾಣಿಕನ ಕಾಲು ಸಿಕ್ಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆ ಬಳಿಕ ತಕ್ಷಣವೇ ಸ್ಥಳೀಯರು ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಇನ್ನು ಘಟನೆಯಿಂದ ಹೆದರಿ ಮಹಿಳೆಯರು ಮತ್ತು ಮಕ್ಕಳು ರೋಧಿಸುತ್ತಿದ್ದರು. ಸ್ಥಳಕ್ಕೆ ಅರಸೀಕರೆ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಕರ್ನಾಟಕದ ​ಆರ್​ಟಿಸಿ ಬಸ್; 6 ಮಂದಿ ಸಾವು

Share This Video


Download

  
Report form
RELATED VIDEOS