₹857 ಕೋಟಿ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಇಲಾಖೆಯ ಅಭಿವೃದ್ಧಿ: ಸಚಿವ ದಿನೇಶ್​ ಗುಂಡೂರಾವ್

ETVBHARAT 2025-09-27

Views 8

ರಾಯಚೂರು: "ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಇಲಾಖೆಯನ್ನು ಉತ್ತೇಜನಕ್ಕೆ ನೀಡುವ ನಿಟ್ಟಿನಲ್ಲಿ 857 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿ ಕಾಮಗಾರಿ ನಡೆಯುತ್ತಿದೆ" ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್​ ಗುಂಡೂರಾವ್​​ ಹೇಳಿದರು.

ಜಿಲ್ಲೆಯ ಸಿಂಧನೂರಿನ ನಗರದ ಸರ್ಕ್ಯೂಟ್ ಹೌಸ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ 350 ಕೋಟಿ ರೂ. ಸರ್ಕಾರದ 500 ಕೋಟಿ ರೂ. ಅನುದಾನ ಈ ಭಾಗದ ಆರೋಗ್ಯ ಇಲಾಖೆಗೆ ಮಾಡಿದ್ದು, ಇದೊಂದು ಐತಿಹಾಸಿಕ ಅನುದಾನವಾಗಿದೆ. ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ, 3 ಸಮುದಾಯ ಆರೋಗ್ಯ ಕೇಂದ್ರ ಸ್ಥಾಪನೆ, ಲಿಂಗಸೂಗುರು ತಾಲೂಕಿಗೆ ಕ್ರಿಟಿಕಲ್ ಕೇರ್ ಆಸ್ಪತ್ರೆ ಮಂಜೂರು ಮಾಡಲಾಗಿದೆ. ಜಿಲ್ಲೆಗೆ ಒಟ್ಟು 16 ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ" ಎಂದು ತಿಳಿಸಿದರು.

"ಯಾದಗಿರಿ ಸೇರಿ ಎರಡು ಜಿಲ್ಲೆಯಲ್ಲಿ ಆರೋಗ್ಯ ಆವಿಷ್ಕಾರ ಯೋಜನೆಗೆ ಸಿಎಂ ಚಾಲನೆ‌ ನೀಡಿದ್ದು, ಆರೋಗ್ಯ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಬಸವಕಲ್ಯಾಣ ಮತ್ತು ಸಿಂಧನೂರು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿದ್ದು, ಹೆಚ್ಚುವರಿ 100 ಹಾಸಿಗೆಗಳನ್ನು ನೀಡುವ ಮೂಲಕ ಎಂಆರ್, ಸಿಟಿ ಸ್ಕ್ಯಾನಿಂಗ್​ ಸೇರಿ ಮೂಲಭೂತ ಸೌಕರ್ಯಗಳಗಳನ್ನು ಒದಗಿಸಲಾಗುವುದು" ಎಂದರು. ರಾಜ್ಯದಲ್ಲಿ 1,800 ಎಂಬಿಬಿಎಸ್​ ವೈದ್ಯರನ್ನು ನೇಮಕ ಮಾಡಲಾಗಿದ್ದು, ವೈದ್ಯರ ಸಮಸ್ಯೆ ಇಲ್ಲ" ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕ ಹಂಪನಗೌಡ ಬಾದರ್ಲಿ ಹಾಜರಿದ್ದರು.

ಇದನ್ನೂ ಓದಿ: ಶಾಲೆ ಜಾಗವನ್ನು ಕುಡಿಯುವ ನೀರಿನ ಯೋಜನೆಗೆ ನೀಡಿದ ಪಿಡಿಒ: ಬೇರೆಡೆ ಜಾಗ ನೀಡುವಂತೆ ಗ್ರಾಮಸ್ಥರಿಂದ ಒತ್ತಾಯ

Share This Video


Download

  
Report form
RELATED VIDEOS