ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ..! ಮೋಹನ್ ಲಾಲ್ ನಟನೆಯ ವೃಷಭ ಸಿನಿಮಾ

Views 15.8K

ಸ್ಯಾಂಡಲ್ವುಡ್ ನಿರ್ದೇಶಕ ನಂದ ಕಿಶೋರ್  ಆ್ಯಕ್ಷನ್-ಕಟ್ ಹೇಳಿರುವ ‘ವೃಷಭ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ನಿನ್ನೆ ಕೊಚ್ಚಿಯಲ್ಲಿ ಅದ್ದೂರಿಯಾಗಿ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ತಾರಾಗಣದಲ್ಲಿರುವ ಮೋಹನ್ ಲಾಲ್, ಸಮರ್ಜಿತ್ ಲಂಕೇಶ್, ರಾಗಿಣಿ ದ್ವಿವೇದಿ ಮತ್ತು ನಯನ್ ಸಾರಿಕಾ, ನಿರ್ದೇಶಕ ನಂದ ಕಿಶೋರ್ ಹಾಜರಿದ್ರು. ವೃಷಭ‌ ಸಿನಿಮಾ ಪ್ರೀತಿ, ವಿಧಿ ಮತ್ತು ತ್ಯಾಗದ ಕಥೆಯಾಗಿದೆ. ಮೋಹನ್ ಲಾಲ್ ಡಬ್ಬಲ್ ರೋಲ್ ನಲ್ಲಿ ನಟಿಸಿದ್ದಾರೆ. ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಮೋಹನ್ ಲಾಲ್ ಮಗನ ಪಾತ್ರ ಮಾಡಿದ್ದಾರೆ. ಡಿಸೆಂಬರ್ 25ಕ್ಕೆ ವಿಶ್ವದಾದ್ಯಂತ ವೃಷಭ ಚಿತ್ರ ತೆರೆಗೆ ಬರಲಿದೆ.

Share This Video


Download

  
Report form
RELATED VIDEOS